ಬೆಳ್ಳಂಬೆಳಗ್ಗೆ ಅಂಡಮಾನ್ ನಿಕೋಬಾರ್ ನಲ್ಲಿ ಭೂಕಂಪನ Earthquake
ಅಂಡಮಾನ್ : ಇಂದು ಬೆಳ್ಳಂಬೆಳಗ್ಗೆ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಪ್ರಬಲ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 5ರಷ್ಟು ತೀವ್ರತೆ ದಾಖಲಾಗಿದೆ.
ಅಂಡಮಾನ್ ನಿಕೋಬಾರ್ ನ ಕ್ಯಾಂಪ್ ಬೆಲ್ ಕೊಲ್ಲಿಯಲ್ಲಿ ಭೂಕಂಪನ ಸಂಭವಿಸಿದ್ದು, ಸುಮಾರು 40 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಅಧ್ಯಯನ ಕೇಂದ್ರ ಮಾಹಿತಿ ನೀಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.









