ಅಮರಿಂದರ್ ಸಿಂಗ್ ರಾಜೀನಾಮೆ : ಕಾರಣ ಬಿಚ್ಚಿಟ್ಟ ಜೋಶಿ Amarinder Singh
ದಾವಣಗೆರೆ : ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದು, ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಓರ್ವ ಸಮರ್ಥ ಮುಖ್ಯಮಂತ್ರಿಯಾಗಿದ್ದರು.
ಇದ್ದ ಒಬ್ಬ ಸಿಎಂ ಅವರನ್ನೂ ಕಾಂಗ್ರೆಸ್ ತೆಗೆದು ಹಾಕಿ ಈಗ ಗೊಂದಲದಲ್ಲಿದೆ.
ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗಿಂತಲೂ ಅಮರಿಂದರ್ ಸಿಂಗ್ ಪಾಪ್ಯುಲರ್ ಆಗುತ್ತಿದ್ದರು.
ಇದೇ ದುರುದ್ದೇಶಕ್ಕೆ ಅವರನ್ನು ಸಿಎಂ ಸ್ಥಾನದಿಂದ ಕಾಂಗ್ರೆಸ್ ಕೆಳಗಿಳಿಸಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ರಾಜ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಹ್ಲಾದ್ ಜೋಶಿ, ರಾಜ್ಯ ಕಾಂಗ್ರೆಸ್ ನಲ್ಲೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಇದೆ.
ಹೀಗಾಗಿ ಹೈಕಮಾಂಡ್ ಓಲೈಸಲು ಇಬ್ಬರೂ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕುಟುಕಿದ್ದಾರೆ.









