ಪತಿಯ ಕಿರುಕುಳ | 4 ತಿಂಗಳ ಗರ್ಭಿಣಿ ಆತ್ಮಹತ್ಯೆ belagavi saaksha tv
ಬೆಳಗಾವಿ : ಪತಿಯ ಕಿರುಕುಳಕ್ಕೆ ಬೇಸತ್ತು ನಾಲ್ಕು ತಿಂಗಳ ಗರ್ಭೀಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಖಂಜರ್ ಗಲ್ಲಿಯಲ್ಲಿ ನಡೆದಿದೆ.
ಮುಸ್ಕಾನ್ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯಾಗಿದ್ದು, ಈಕೆ ಎಂಟು ತಿಂಗಳಿಂದೆ ರೋಹಿಮ್ ಎಂಬಾತನನ್ನು ಮದುವೆಯಾಗಿದ್ದಳು.
ಆರಂಭದಲ್ಲಿ ಚೆನ್ನಾಗಿಯೇ ಇದ್ದ ಪತಿ ರೋಹಿಮ್ ಕಾಲ ಕಳೆಯುತ್ತಿದ್ದಂತೆ ವರದಕ್ಷಿಣೆಗಾಗಿ ಪೀಡಿಸಲು ಆರಂಭಿಸಿದ್ದಾನಂತೆ.
ಪ್ರತಿದಿನ ಗಾಂಜಾ ಸೇವಿಸಿ ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಮನನೊಂದ ಮುಸ್ಕಾನ್ ನೇಣಿಗೆ ಕೊರಳೊಡ್ಡಿದ್ದಾಳೆ.
ಇನ್ನು ಮುಸ್ಕಾನ್ ಳ ಕುಟುಂಬದವರು ರೋಹಿಮ್ ವಿರುದ್ಧ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ ನೀಡುತ್ತಿದ್ದ ಬಗ್ಗೆ ದೂರು ದಾಖಲಿಸಿದ್ದಾರೆ.
ಸದ್ಯ ಆರೋಪಿ ರೋಹಿಮ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.









