ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲುಗೊಳಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಸಿಎಂ ಯೂರಪ್ಪನವರನ್ನ ಭೇಟಿ ಮಾಡಿದ ಕನ್ನಡ ಪರ ಹೋರಾಟಗಾರರು ಮನವಿಪತ್ರ ನೀಡಿ, ಡಾ.ಸರೋಜಿನಿ ಮಹಿಷಿ ಅವರ ವರದಿಯನ್ನ ಜಾರಿಗೊಳಿಸುವಂತೆ ಆಗ್ರಹಿಸಿದ್ರು.
ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮಗಳನ್ನು ಕೈಗೊಂಡು ಕನ್ನಡಿಗರಿಗೆ ಉದ್ಯೋಗವನ್ನ ಮೀಸಲುಗೊಳಿಸಬೇಕು ಎಂದು ಪ್ರತಿಭಟನೆ ನಡೆಸಲಾಯಿತು. ಕನ್ನಡ ಪರ ಹೋರಾಟಗಾರರು ಕರೆಯಲಾಗಿದ್ದ ಕರ್ನಾಟಕ ಬಂದ್‍ಗೆ ಕಾಂಗ್ರೆಸ್ ಸೇರಿ 600ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲವನ್ನ ವ್ಯಕ್ತಪಡಿಸಿದ್ದವು. ಇಂದು ಕರೆಯಲಾಗಿದ್ದ ಬಂದ್‍ಗೆ ರಾಜ್ಯದ ನಾನಾ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ಮತ್ತೆ ಕೆಲವೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.








