17 ವರ್ಷದಾಕೆ ಮೇಲೆ ಸಾಮೂಹಿಕ ಅತ್ಯಾಚಾರ – ವಿಡಿಯೋ ಹರಿಬಿಟ್ಟ ಕೀಚಕರು
ಬಿಹಾರ : 17 ವರ್ಷದ ಅಪ್ರಾಪ್ತೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿ ವಿಡಿಯೋ ಸೆರೆ ಹಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇಂತಹ ಹೇಯ ಘಟನೆ ಬಿಹಾರದ ಮುಜಾಫುರದ ಭೋಪಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಕಿಡಿಗೇಡಿಗಳು ಅತ್ಯಾಚಾರವನ್ನು ರೆಕಾರ್ಡ್ ಮಾಡಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭೋಪಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಆರೋಪಿಗಳಾದ ಶುಭಂ ಮತ್ತು ಆಶಿಶ್ ವಿರುದ್ಧ ಪ್ರಕರಣ ದಾಖಲಾಗಿದ್ದು ಇಬ್ಬರೂ ತಲೆಮರೆಸಿಕೊಂಡಿದ್ದಾರೆ ಎಂದು ಠಾಣಾಧಿಕಾರಿ ಸುಭಾಷ್ ಬಾಬು ತಿಳಿಸಿದ್ದಾರೆ. ಸಂತ್ರಸ್ತೆಗೆ ಹಣ್ಣು ನೀಡುವ ಆಮಿಷವೊಡ್ಡಿ ಸೀಬೆ ಮರಗಳಿದ್ದ ತೋಟಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಅಪರಾಧದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ನಂತರ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.







