ಮಂಗಳೂರು ಬಜ್ಜಿ
ಬೇಕಾಗುವ ಸಾಮಗ್ರಿಗಳು
ಮೈದಾ ಹಿಟ್ಟು – 1.5 ಕಪ್
ಅಡಿಗೆ ಸೋಡಾ – ಚಿಟಿಕೆಯಷ್ಟು
ಇಂಗು – ಚಿಟಿಕೆಯಷ್ಟು
ರುಚಿಗೆ ತಕ್ಕಷ್ಟು ಉಪ್ಪು
ಮಜ್ಜಿಗೆ/ ಮೊಸರು – 1 ಕಪ್
ಕರಿಬೇವಿನ ಸೊಪ್ಪು -ಸ್ವಲ್ಪ
ಹಸಿಮೆಣಸಿನಕಾಯಿ – 2
ಶುಂಠಿ – 1 ಇಂಚು
ಕೊಬ್ಬರಿ – 2 ಚಮಚ
ಕರಿಯಲು ಎಣ್ಣೆ

ಮಾಡುವ ವಿಧಾನ
ಮೊದಲಿಗೆ ಒಂದು ಪಾತ್ರೆಯಲ್ಲಿ ಮೈದಾ, ಅಡಿಗೆ ಸೋಡಾ, ಇಂಗು ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ನಂತರ ಮಜ್ಜಿಗೆ/ಮೊಸರನ್ನು ಅದಕ್ಕೆ ಸೇರಿಸಿ ಚೆನ್ನಾಗಿ ಬೆರೆಸಿ ಹಿಟ್ಟನ ಜೊತೆ ಚೆನ್ನಾಗಿ ಮಿಶ್ರಣ ಮಾಡಿ.
ಈಗ ಅದಕ್ಕೆ ಸಣ್ಣದಾಗಿ ಕತ್ತರಿಸಿದ ಕರಿಬೇವಿನ ಸೊಪ್ಪು, ಹಸಿ ಮೆಣಸು, ಶುಂಠಿ ಮತ್ತು ಕೊಬ್ಬರಿಗಳನ್ನು ಸೇರಿಸಿ ಚೆನ್ನಾಗಿ ಕಲಸಿ ಮಿಶ್ರಣ ಮಾಡಿ. ಹಿಟ್ಟನ್ನು 3 ಗಂಟೆಗಳ ಕಾಲ ಹಾಗೆಯೇ ಬಿಡಿ.
ನಂತರ, ಹಿಟ್ಟನ್ನು ಮತ್ತೊಮ್ಮೆ ಕಲಸಿ, ಸಣ್ಣ ಸಣ್ಣ ಗಾತ್ರದ ಉಂಡೆಗಳನ್ನು ಮಾಡಿ.
ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಹಿಟ್ಟಿನ ಉಂಡೆಗಳನ್ನು ಎಣ್ಣೆಯಲ್ಲಿ ಬಿಡಿ. ಮಧ್ಯಮ ಜ್ವಾಲೆಯಲ್ಲಿ ಎರಡೂ ಬದಿಗಳನ್ನು ಹೊಂಬಣ್ಣಕ್ಕೆ ತಿರುಗುವವರೆಗೆ ಕರಿಯಿರಿ. ಗರಿಗರಿಯಾದ ನಂತರ ತೆಗೆಯಿರಿ. ಈಗ ಬಿಸಿ ಬಿಸಿ ಮಂಗಳೂರು ಬಜ್ಜಿ ಸವಿಯಲು ಸಿದ್ಧವಾಗಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1439869994137964544?s=19
https://twitter.com/SaakshaTv/status/1439426103802843136?s=19
https://twitter.com/SaakshaTv/status/1439024640035364874?s=19
https://twitter.com/SaakshaTv/status/1439772229206745094?s=19
#Saakshatv #cooking #Mangalore #bajji







