ಸೆಪ್ಟೆಂಬರ್ 24ರ ತನಕ ರಾಜ್ಯದಲ್ಲಿ ಮಳೆ ಸಾಧ್ಯತೆ Rain saaksha tv
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ವರೆಗೂ ವರ್ಷಧಾರೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,
ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯಿದೆ.









