ಮಿಥಾಲಿ ರಾಜ್ ದಾಖಲೆ | 20,000 ಅಂತರರಾಷ್ಟ್ರೀಯ ರನ್ಸ್ Mithali Raj
ಆಸ್ಟ್ರೇಲಿಯಾ : ಭಾರತದ ವನಿತೆಯರ ಕ್ರಿಕೆಟ್ ನ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್ ತಮ್ಮ ಒಟ್ಟಾರೆ ಕ್ರಿಕೆಟ್ ಜೀವನದಲ್ಲಿ 20,000 ರನ್ ಗಳಿಸಿ ದಾಖಲೆ ಬರೆದಿದ್ದಾರೆ.
ಇಂದಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಏಕದಿನ ಸರಣಿ ಆರಂಭವಾಗಿದ್ದು, ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತದ ವನಿತೆಯರು 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 225 ರನ್ ಬಾರಿಸಿದ್ದಾರೆ.
ಪಂದ್ಯದಲ್ಲಿ ಮಿಥಾಲಿ ರಾಜ್ ಅರ್ಧ ಶತಕ ಸಿಡಿಸಿ ಮಿಂಚಿದ್ದು, ತಮ್ಮ ಒಟ್ಟಾರೆ ಕ್ರಿಕೆಟ್ ಜೀವನದಲ್ಲಿ 20,000 ರನ್ ಗಳಿಸಿ ಸಾಧನೆ ತೋರಿದ್ದಾರೆ.
ಇದಲ್ಲದೆ ಭರ್ಜರಿ ಫಾರ್ಮ್ ನಲ್ಲಿರುವ ಮಿಥಾಲಿ ರಾಜ್ ಅರ್ಧಶತಕ ಸಿಡಿಸುವ ಮೂಲಕ ಸತತ 5ನೇ ಅರ್ಧಶತಕ ಸಿಡಿಸಿದ ಮತ್ತೊಂದು ದಾಖಲೆ ಬರೆದಿದ್ದಾರೆ.
ಇದಲ್ಲದೆ ಮಿಥಾಲಿ ರಾಜ್ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ ನ ಮೂರು ಮಾದರಿಯ ಆಟಗಳಲ್ಲಿ ಅತಿ ಹೆಚ್ಚು ಸ್ಕೋರರ್ ಆಗಿ ಹೊರ ಹೊಮ್ಮಿದ್ದಾರೆ.