ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Rain saaksha tv
ಬೆಂಗಳೂರು : ಕಳೆ ಕೆಲ ದಿನಗಳಿಂದ ರಾಜ್ಯದ ವಿವಿದೆಡೆ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೇ ಮಲೆನಾಡು ಜಿಲ್ಲೆಗಳಲ್ಲಿಯೂ ಸಹ ಭಾರಿ ವರ್ಷಧಾರೆಯಾಗಲಿದೆ.
ಅದೇ ರೀತಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇನ್ನೂ 2 ದಿನ ಮಳೆಯ ಆರ್ಭಟ ಇರಲಿದೆ.
ಇನ್ನುಳಿದಂತೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.
ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆ ಆಗುವ ನಿರೀಕ್ಷೆ ಇದೆ.









