ಭೀಕರ ರಸ್ತೆ ಅಪಘಾತ – 6 ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು
ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ವಲಸೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಉತ್ತರ ದಿನಾಜ್ ಪುರದ ರಾಯ್ ಗಂಜ್ ನಲ್ಲಿ ಈ ಅನಾಹುತ ಸಂಭವಿಸಿದೆ.
ಕಾರ್ಮಿಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ೀ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.
ಇನ್ನೂ ವಲಸೆ ಕಾರ್ಮಿಕರು ಜಾರ್ಖಂಡ್ ನಿಂದ ಲಖನೌಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ರಾಜ್ಯದಲ್ಲಿ ಹೆಚ್ಚಾಗ್ತಿದೆ ವೈರಲ್ ಫೀವರ್ ಆತಂಕ : ಚಿಕಿತ್ಸೆ ಅಗತ್ಯ..!
ಐಒಸಿಎಲ್ – ಕಾರ್ಯನಿರ್ವಾಹಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ








