ಕಾಂಗ್ರೆಸ್ ಗೆ ಜೆಡಿಎಸ್ ಟಕ್ಕರ್ : `ಕೈ’ ಬಿಡಲಿದ್ದಾರೆ ಇಬ್ರಾಹಿಂ..!
ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ ಸಿ ಎಂ ಇಬ್ರಾಹಿಂ ಅವರು ಜೆಡಿಎಸ್ ಸೇರಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಲೇ ಇವೆ.
ಆದ್ರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಇದೀಗ ಇಬ್ರಾಹಿಂ ಅವರು ಜೆಡಿಎಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ.
ಇಬ್ರಾಹಿಂ ಅವರು ನವೆಂಬರ್ 1ರ ನಂತರ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಮೊದಲಿಗೆ ಎಂಎಲ್ ಸಿ ಸ್ಥಾನ, ಆಮೇಲೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಲಭ್ಯವಾಗಿದೆ.
ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ ಡಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಡಿಸೆಂಬರ್ ನಲ್ಲಿ ಇಬ್ರಾಹಿಂ ಪಟ್ಟಾಭೀಷೇಕ ನಡೆಯಲಿದೆಯಂತೆ. ಆ ಮೂಲಕ ಅಲ್ಪಸಂಖ್ಯಾತರ ವೋಟ್ ಭದ್ರಪಡಿಸಿಕೊಳ್ಳಲು ಜೆಡಿಎಸ್ ಪ್ಲಾನ್ ಮಾಡಿಕೊಂಡಿದೆ.









