ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 50,000 ಪರಿಹಾರ
ನವದೆಹಲಿ : ಚೀನಾದಿಂದ ಇಡೀ ವಿಶ್ವಾದ್ಯಂತ ಹಬ್ಬಿ ಕೋಟ್ಯಾಂತರ ಜನರ ಜೀವನ ತೆಗೆದ ಮಹಾಮಾರಿ ಕೊರೊನಾದಿಂದ ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಅನೇಕರು ಆಪ್ತರನ್ನ , ಸ್ನೇಹಿತರು , ಕುಟುಂಬದ ಆಧಾರಗಳನ್ನ ಕಳೆದುಕೊಂಡಿದ್ದಾರೆ. ಇದೀಗ ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 50, 000 ರೂಪಾಯಿ ಪರಿಹಾರ ನೀಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA) ಶಿಫಾರಸು ಮಾಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ತಿಳಿಸಿದೆ.
ಈ ಬಗ್ಗೆ ಸುಪ್ರೀಂಕೋರ್ಟ್‍ಗೆ ಉತ್ತರಿಸಿರುವ ಕೇಂದ್ರ ಸರ್ಕಾರ, ಕೊರೊನಾದಿಂದಾಗಿ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಐಸಿಎಂಆರ್ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಕೋವಿಡ್-19ನಿಂದ ಮೃತಪಟ್ಟಿದ್ದಾರೆ ಎಂದು ಪ್ರಮಾಣೀಕರಿಸಿದರೆ ಪರಿಹಾರ ನೀಡಲು ಸರ್ಕಾರ ಸಿದ್ಧಗೊಂಡಿದೆ. ಅದಲ್ಲದೆ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ರಾಜ್ಯ ಸರ್ಕಾರಗಳು ಪರಿಹಾರ ನೀಡಲು ಮುಂದಾಗಿದೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಭಾರತದಲ್ಲಿ ಕೊರೊನಾದಿಂದ ಸುಮಾರು 4 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.








