ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರದ ಬಗ್ಗೆ ಮೋದಿ – ಕಮಲಾ ಹ್ಯಾರಿಸ್ ಚರ್ಚೆ
ಅಮೆರಿಕಾದಲ್ಲಿ 3 ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ವೈಟ್ ಹೌಸ್ ನಲ್ಲಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನ ಭೇಟಿ ಮಾಡಿ ಕೆಲ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಅಮೆರಿಕಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ನಿರ್ಧಾರ ಮಾಡಿದ್ದಾರೆ. ಅಲ್ಲದೇ ಅಫ್ಘಾನಿಸ್ತಾನ ಮತ್ತು ಇಂಡೋ – ಫೆಸಿಫಿಕ್ ಸೇರಿದಂತೆ ಸಾಮಾನ್ಯ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳನ್ನ ಚರ್ಚೆ ಮಾಡಿದ್ರು. ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರದ ಬಗ್ಗೆ ಮೋದಿ ಹಾಗೂ ಕಮಲಾ ಹ್ಯಾರಿಸ್ ಚರ್ಚೆ ಮಾಡಿದ್ದಾರೆ.
ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗಿನ ಮೊದಲ ಭೇಟಿಯ ಸಮಯದಲ್ಲಿ, ‘ಸುಮೋ ಮೋಟೋ’ ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಮತ್ತು ಇಸ್ಲಾಮಾಬಾದ್‌ಗೆ ಕ್ರಮ ಕೈಗೊಳ್ಳುವಂತೆ ಅವರು ಕೇಳಿಕೊಂಡಿದ್ದಾರೆ ಮತ್ತು ಈ ವಿಷಯವು ಭಾರತ ಮತ್ತು ಅಮೆರಿಕದ ಭದ್ರತೆಗೆ ಧಕ್ಕೆ ತರುವುದಿಲ್ಲ ಎಂದು ಹ್ಯಾರಿಸ್ ಉಲ್ಲೇಖಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಪಾಕಿಸ್ತಾನದಲ್ಲಿ ಭಯೋತ್ಪಾದಕ ಗುಂಪುಗಳು ಕೆಲಸ ಮಾಡುತ್ತಿವೆ ಎಂದು ಅಮೆರಿಕದ ಉಪಾಧ್ಯಕ್ಷರು ಉಲ್ಲೇಖಿಸಿದ್ದಾರೆ. ಅಲ್ಲದೇ ಪಾಕಿಸ್ತಾನ ಮತ್ತು ಅಮೆರಿಕದ ಭದ್ರತೆಯ ಮೇಲೆ ಪರಿಣಾಮ ಬೀರದಂತೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡರು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಹೇಳಿದ್ದಾರೆ. ಕಮಲಾ ಹ್ಯಾರಿಸ್ ಎರಡು ದೇಶಗಳ ಜನರ ಹಿತಾಸಕ್ತಿಗಾಗಿ ಪ್ರಜಾಪ್ರಭುತ್ವಗಳನ್ನು ರಕ್ಷಿಸುವುದು ಎರಡು ರಾಷ್ಟ್ರಗಳ ಜವಾಬ್ದಾರಿಯಾಗಿದೆ ಎಂದು ಈ ವೇಳೆ ಅಭಿಪ್ರಾಯ ಹೊರಹಾಕಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ಅವರು ಗುರುವಾರ ವೈಟ್ ಹೌಸ್ ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗೆ ಭಾರತ-ಯುಎಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಅಫ್ಘಾನಿಸ್ತಾನ ಮತ್ತು ಇಂಡೋ-ಪೆಸಿಫಿಕ್ ಸೇರಿದಂತೆ ಸಾಮಾನ್ಯ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳನ್ನು ಕೂಡ ಚರ್ಚಿಸಿದ್ದಾರೆ.








