ನಾಳೆ ಭಾರತ್ ಬಂದ್ | 500ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ
ಬೆಂಗಳೂರು : ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ದೇಶದಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ.
ಇದರ ಮುಂದುವರೆದ ಭಾಗವಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ನಾಳೆ ಅಂದರೇ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ.
ಹೀಗಾಗಿ ರಾಜ್ಯದಲ್ಲಿ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಇನ್ನು ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ದೇಶಾದ್ಯಂತ 500ಕ್ಕೂ ಹೆಚ್ಚು ಸಂಘಟನೆಗಳು ಭಾರತ್ ಬಂದ್ ಗೆ ಬೆಂಬಲ ನೀಡಲಿವೆ.
ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಸಂಘ, ರೈತ ಸಂಘ, ಹಸಿರು ಸೇನೆ ಸೇರಿ ಕೆಲ ಸಂಘಟನೆಗಳು ಬೆಂಬಲ ನೀಡಿವೆ.
ಆದ್ರೆ ಬಂದ್ ಹೊರತಾಗಿಯೂ ರಾಜ್ಯದಲ್ಲಿ ಎಲ್ಲವೂ ಯಥಾಸ್ಥಿತಿ ಇರುವ ಸಾಧ್ಯತೆಗಳು ಕಾಣುತ್ತಿವೆ. ಯಾಕಂದರೇ ಬಂದ್ ಗೆ ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ನೀಡಿವೆ. ನೈತಿಕ ಬೆಂಬಲ ನೀಡುತ್ತೇವೆ, ಆದ್ರೆ ಅಂಗಡಿ ಮುಂಗಟ್ಟು ಬಂದ್ ಮಾಡಲ್ಲ ಎಂದು ಹೇಳುತ್ತಿದ್ದಾರೆ.
ಇದಲ್ಲದೇ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇರಲಿವೆ. ಅದೇ ರೀತಿ ಆಟೋ, ಊಬರ್, ಓಲಾ ಸಂಘಟನೆಗಳೂ ಸಹ ನೈತಿಕ ಬೆಂಬಲ ನೀಡಲಿವೆ. ರಾಜ್ಯ ಹೋಟೆಲ್ ಮಾಲೀಕರ ಸಂಘ ನಾಳೆ ತೀರ್ಮಾನ ಮಾಡಿ ಬೆಂಬಲ ನೀಡುವ ಬಗ್ಗೆ ತಿಳಿಸಲಿದೆ.