ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಭೀಕರ ಅಪಘಾತದಲ್ಲಿ ಇಬ್ಬರ ಸಾವು
ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಹೊಸೂರು ಸಮೀಪ ನಡೆದಿದೆ.
ರಾಂಗ್ ರೂಟ್ ನಲ್ಲಿ ಬಂದ ಕಾರ್ ಗೆ ಮತ್ತೊಂದು ಕಾರ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಕಾರ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ತಮಿಳುನಾಡಿ ಹೊಸೂರು ಸಮೀಪದ ಸೂಳಗಿರಿ ಬಳಿ ಅಪಘಾತ ಸಂಭವಿಸಿದೆ.
ಭೀಕರ ರಸ್ತೆ ಅಪಘಾತ : ಪರೀಕ್ಷೆಗೆ ತೆರಳುತ್ತಿದ್ದ 5 ವಿದ್ಯಾರ್ಥಿಗಳು ಸಾವು
ಈ ಘಟನೆಯಲ್ಲಿ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿಯಾದ 21 ವರ್ಷದ ಸುಮಂತ್ ಮತ್ತು ಕೋರಮಂಗಲ ನಿವಾಸಿ 34 ವರ್ಷದ ವಿನ್ಸೆಂಟ್ ಗೋಪಿ ಮೃತಪಟ್ಟಿದ್ದಾರೆ.
ಸೂಳಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸ್ತಾಯಿದ್ದಾರೆ. ಸ್ಥಳ ಪರಿಶೀಲಿಸಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.








