ಪಾಕಿಸ್ತಾನದ ವಿರುದ್ಧ ತಿರುಗಿ ಬಿದ್ದ POK ಜನ – ಪ್ರತಿಭಟನೆ
ಭಾರತದ ಕಾಶ್ಮೀರದ ಭಾಗವನ್ನ ( POK) ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪಾಕಿಸ್ತಾನದ ವಿರುದ್ಧ ಪಾಕ್ ಆಕ್ರಮಿತ ಕಾಶ್ಮೀರ (POK) ಮತ್ತು ಗಿಲ್ಗಿಟ್–ಬಾಲ್ಟಿಸ್ತಾನದ ರಾಜಕೀಯ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಸ್ವಿಜರ್ಲೆಂಡ್‌ನ ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಕಚೇರಿ ಎದುರು ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ನಿರ್ಮೂಲನೆಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಪಾಕಿಸ್ತಾನದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನೂ ಕೂಗಿರೋದಾಗಿ ವರದಿಯಾಗಿದೆ.
ಇನ್ನೂ ಯುನೈಟೆಡ್ ಕಾಶ್ಮೀರ್ ಪೀಪಲ್ಸ್ ನ್ಯಾಷನಲ್ ಪಾರ್ಟಿ , ಸ್ವಿಸ್ ಕಾಶ್ಮೀರ್ ಹ್ಯೂಮನ್ ರೈಟ್ಸ್ ಆ್ಯಂಡ್ ಜಮ್ಮು–ಕಾಶ್ಮೀರ್, ಇಂಟರ್‌ನ್ಯಾಷನಲ್ ಪೀಪಲ್ಸ್ ಅಲಯನ್ಸ್ ಗಳು ಮಾನವಹಕ್ಕುಗಳ ಮಂಡಳಿಯ 48ನೇ ಅಧಿವೇಶನದ ಸಂದರ್ಭದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿವೆ.








