ಟೆಸ್ಟ್ ಕ್ರಿಕೆಟ್ ಗೆ ಮೋಯಿನ್ ಅಲಿ ವಿದಾಯ Moeen Ali saaksha tv
ಲಂಡನ್ : ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್ ಮೋಯಿನ್ ಅಲಿ ವಿದಾಯ ಘೋಷಿಸಿದ್ದಾರೆ.
ಮುಂಬರುವ ಐಸಿಸಿ ಟಿ-20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಮೋಯಿನ್ ಅಲಿ ತಿಳಿಸಿದ್ದಾರೆ.
2014ರಲ್ಲಿ ಇಂಗ್ಲೆಂಡ್ ಪರ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಮೋಯಿನ್ ಅಲಿ, 64 ಟೆಸ್ಟ್ ಪಂದ್ಯಗಳನ್ನಾಡಿದ್ದು, 2914 ರನ್ ಗಳಿಸಿದ್ದಾರೆ. 195 ವಿಕೆಟ್ ಪಡೆದಿದ್ದಾರೆ.
ಇನ್ನು ಟೆಸ್ಟ್ ನಲ್ಲಿ ಐದು ಶತಕ, 14 ಅರ್ಧಶತಕಗಳನ್ನು ಸಿಡಿಸಿದ್ದಾರೆ.
ಪ್ರಸ್ತುತ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಪರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡುತ್ತಿದ್ದಾರೆ.
ಈ ಹಿಂದೆ ಆರ್ ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.









