ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದ ಸಚಿವ ವಿ.ಸೋಮಣ್ಣ Somanna saaksha tv
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾವೇರಿಪುರದಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಲು ಆದೇಶಿಸಿದರು.
ಬಳಿಕ, ಮೂಡಲಪಾಳ್ಯದ ನೆಲಮಟ್ಟದ ಮೀಸಲು ನೀರು ಭೇಟಿ ನೀಡಿದ ಸಚಿವರು, ಇನ್ನೇನು ಕೆಲವೇ ದಿನಗಳಲ್ಲಿ ಇದು ಉದ್ಘಾಟನೆಯಾಗಲಿದೆ ಎಂದರು.
ಇನ್ನು ನಿರ್ಮಾಣ ಹಂತದಲ್ಲಿರುವ ಸಂಜೀವ ನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.









