ಕೊರೊನಾ ರಿಪೋರ್ಟ್ | ಕಳೆದ 24 ಗಂಟೇಲಿ 18,870 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಳಿತ ಮುಂದುವರೆದಿದೆ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,870 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 378 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಚೇತರಿಕೆಯ ಪ್ರಮಾಣ ಶೇಕಡ 97.81 ರಷ್ಟಿದೆ.
ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,37,16,451ಕ್ಕೆ ಏರಿಕೆಯಾಗಿದೆ. ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,47,751 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2,82,560 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
3,29,86,180 ಗುಣಮುಖರಾಗಿದ್ದಾರೆ.
ಒಟ್ಟು ಚೇತರಿಕೆ ದರವು ಸುಮಾರು ಶೇಕಡ 97.81 ರಷ್ಟಿದೆ.









