ಕ್ಯಾಂಟರ್ ಪಲ್ಟಿ | ಇಬ್ಬರು ಸಾವು.. ಇಬ್ಬರಿಗೆ ಗಾಯ darawad saaksha tv
ಧಾರವಾಡ : ಕ್ಯಾಂಟರ್ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಸದ್ಯ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.









