ಗುಡ್ ನ್ಯೂಸ್ – ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ
ರಾಜ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. 4 ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಅಸ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ.
ರಾಜ್ಯದ 4 ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಬೋಧನೆ ಮಾಡಲಾಗುವುದು. ವಿಜಯಪುರದ ಬಿಎಲ್ ಡಿಇ ಕಾಲೇಜು, ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ಚಿಕ್ಕಬಳ್ಳಾಪುರದ ಎಸ್.ಜೆ.ಆರ್ ಕಾಲೇಜು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಷ್ಟೇ ಅಲಲ್ಲದೇ ಈಗಾಗಲೇ ಕನ್ನಡದಲ್ಲಿ ಪಠ್ಯ ಪುಸ್ತಕ ಸಿದ್ಧತೆ ಮಾಡಲಾಗಿದೆ ಎಂದಿದ್ದಾರೆ ಅಶ್ವಥ್ ನಾರಾಯಣ್.
ಅಷ್ಟೇ ಅಲ್ಲದೇ ಕೊರೊನಾ ಹಾವಳಿ ಹಿನ್ನೆಲೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಾಗುತ್ತೆ ಎಂಬ ವದಂತಿಗಳಿಗೂ ಸಚಿವರು ಸ್ಪಷ್ಟನೆ ನೀಡಿದ್ದು, ಪ್ರಸಕ್ತ ವರ್ಷ 20,000 ರೂಪಾಯಿಗಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ ಎಂದಿದ್ದಾರೆ.