ಪಂಜಾಬ್ ನಲ್ಲಿ 55 ಲಕ್ಷ ಜನರ ಬಾಕಿಯಿರುವ ವಿದ್ಯುತ್ ಬಿಲ್ ಮನ್ನಾ
ಪಂಜಾಬ್ : ಪಂಜಾಬ್ ಕಾಂಗ್ರೆಸ್ ನಲ್ಲಿ ಅಲ್ಲಕಲ್ಲೋಲ ಸೃಷ್ಠಿಯಾಗಿದೆ. ಅಮರಿಂದರ್ ಸಿಂಗ್ ರಾಜೀನಾಮೆ ಬೆನ್ನಲ್ಲೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಕೂಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಈ ಬೆಳವಣಿಗೆಗಳ ಮಧ್ಯೆ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಚರಣ್ ಜಿತ್ ಸಿಂಗ್ ನೇತೃತ್ವದ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ಬರೋಬ್ಬರಿ 55 ಲಕ್ಷ ಜನರ (ಡೀಫಾಲ್ಟರ್) ಬಾಕಿಯಿರುವ 1,200 ಕೋಟಿ ರೂಪಾಯಿಯ ವಿದ್ಯುತ್ ಬಿಲ್ ಮನ್ನಾ ಮಾಡಿ ಚರಣ್ ಜಿತ್ ಸಿಂಗ್ ಆದೇಶ ಹೊರಡಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಅಂದಹಾಗೆ ಚರಣ್ ಜಿತ್ ಸಿಂಗ್ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕರಿಸುವ ವೇಳೆ ವಿದ್ಯುತ್ ಬಿಲ್, ನೀರಿನ ಬಿಲ್ ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇದೀಗ ವಿದ್ಯುತ್ ಬಿಲ್ ಮನ್ನಾ ಮಾಡಿ ಆದೇಶ ಹೊರಡಿಸಿದ್ದಾರೆ.