ಮಲಗುವ ಮುನ್ನ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸ ಬೆರೆಸಿ ಕುಡಿಯುವುದರ ಆರೋಗ್ಯ ಪ್ರಯೋಜನಗಳು
ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಮಾನವನ ದೇಹವು ಸುಮಾರು 60 ಪ್ರತಿಶತದಷ್ಟು ನೀರಿನಿಂದ ಕೂಡಿದ್ದು, ದೇಹವನ್ನು ಆರೋಗ್ಯವಾಗಿಡುವಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ.
ನಿಂಬೆ ರಸವನ್ನು ನೀರಿನೊಂದಿಗೆ ಬೆರೆಸಿದಾಗ, ಅದರ ಪ್ರಯೋಜನಗಳು ಅನೇಕ ಪಟ್ಟು ಹೆಚ್ಚಾಗುತ್ತದೆ. ಅದೇ ರೀತಿ ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ.

ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯುವುದರ ಆರೋಗ್ಯ ಪ್ರಯೋಜನಗಳು
1. ನಿಂಬೆಹಣ್ಣು ಒಂದು ಸಿಟ್ರಸ್ ಆಹಾರವಾಗಿದ್ದು, ಇದರಲ್ಲಿ ವಿಟಮಿನ್ ಸಿ ಅಂಶವು ಸಮೃದ್ಧವಾಗಿದೆ. ಹಾಗಾಗಿ ನಿಂಬೆ ರಸವನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಇದು ದೇಹದಲ್ಲಿ ವಿಟಮಿನ್ ಸಿ ಕೊರತೆಯನ್ನು ನೀಗಿಸುತ್ತದೆ.
2. ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯುವುದರಿಂದ ದೇಹವು ತೇವಾಂಶದಿಂದ ಕೂಡಿರುತ್ತದೆ. ನಿಂಬೆ ಬೆರೆಸಿದ ನೀರು ಚರ್ಮವನ್ನು ತೇವವಾಗಿಡಲು ಸಹಾಯ ಮಾಡುವುದರ ಜೊತೆಗೆ ಇದರಲ್ಲಿರುವ ವಿಟಮಿನ್ ಸಿ ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
3. ಸಕ್ಕರೆ ರಹಿತ ಲಿಂಬೆ ಪಾನೀಯವು ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಮಲಗುವ ಮುನ್ನ ಬಿಸಿ ನೀರಿಗೆ ನಿಂಬೆ ರಸ ಬೆರೆಸಿ ಕುಡಿದರೆ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
4. ಆರೋಗ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಮಸ್ಯೆಗಳು ಕಳಪೆ ಜೀರ್ಣಕ್ರಿಯೆಯಿಂದಾಗಿವೆ. ಆದ್ದರಿಂದ, ಆಹಾರ ಸರಿಯಾಗಿ ಜೀರ್ಣಗೊಂಡರೆ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು. ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಸೇವಿಸುವುದು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಜೊತೆಗೆ ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
5. ನಿಂಬೆ ರಸ ಬೆರೆಸಿದ ನೀರು ನೈಸರ್ಗಿಕ ಬಾಯಿ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತದೆ. ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಕುಡಿದರೆ ಬಾಯಿಯ ದುರ್ವಾಸನೆ ತಡೆಯಬಹುದು. ಇದು ಹೈಡ್ರೇಟಿಂಗ್ ಪಾನೀಯವಾಗಿದ್ದು, ಇದು ಬಾಯಿಯನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ.
6. ಮೂತ್ರಪಿಂಡವು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ಆರೋಗ್ಯವಾಗಿರಲು ಮೂತ್ರಪಿಂಡದ ಸಮಸ್ಯೆಗಳಿಂದ ದೂರವಿರುವುದು ಬಹಳ ಮುಖ್ಯ. ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳನ್ನು ತಡೆಗಟ್ಟಬಹುದು. ಇದು ಕ್ಯಾಲ್ಸಿಯಂ ಕಲ್ಲುಗಳ ರಚನೆಯನ್ನು ತಡೆಯುವ ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಮೈದಾ ಹಿಟ್ಟು ದೇಹಕ್ಕೆ ಅಪಾಯಕಾರಿಯೇ? https://t.co/7FVEPGo9pS
— Saaksha TV (@SaakshaTv) September 28, 2021
ಕ್ಯಾನ್ಸರ್, ಹೃದಯ ಕಾಯಿಲೆ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳಿಗೆ ಅಗಸೆ ಬೀಜಗಳ ಪ್ರಯೋಜನಗಳು https://t.co/KO091FmNrP
— Saaksha TV (@SaakshaTv) September 29, 2021
ಉತ್ತಮ ಲಾಭದ ಅಂಚೆ ಇಲಾಖೆಯ ಸೂಪರ್ ಹಿಟ್ ಎಂಐಎಸ್ ಯೋಜನೆ https://t.co/MOjDv2w6Ho
— Saaksha TV (@SaakshaTv) September 29, 2021
ರುಚಿಯಾದ ಚಿರೋಟಿ https://t.co/OmCa5Me5Ag
— Saaksha TV (@SaakshaTv) September 29, 2021
#Saakshatv #healthtips #lemonjuice








