ಸಿದ್ದರಾಮಯ್ಯಗೆ ಸಂಪೂರ್ಣ ಹುಚ್ಚು ಹಿಡಿದಿದೆ : ಈಶ್ವರಪ್ಪ Siddaramaiah saaksha tv
ಶಿವಮೊಗ್ಗ : ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಹುಚ್ಚು ಹಿಡಿದಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಆರ್ ಎಸ್ ಎಸ್ ನವರದ್ದು ತಾಲಿಬಾನ್ ಸಂಸ್ಕøತಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಕೆ.ಎಸ್.ಈಶ್ವರಪ್ಪ, ಕೆಲವರಿಗೆ ಸ್ವಲ್ಪ ಹುಚ್ಚು ಇರುತ್ತದೆ.
ಇನ್ನೂ ಕೆಲವರಿಗೆ ಅರ್ಧ ಹುಚ್ಚು ಇರುತ್ತದೆ. ಆದರೆ ಸಿದ್ದರಾಮಯ್ಯಗೆ ಸಂಪೂರ್ಣ ಹುಚ್ಚು ಹಿಡಿದಿದೆ.
ಸಿದ್ದರಾಮಯ್ಯನ ಹುಚ್ಚು ಯಾವಾಗ ಕಡಿಮೆಯಾಗುತ್ತದೆಯೋ ಆವಾಗ ಅವರ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದು ಕಿಡಿಕಾರಿದರು.
ಹಾಗೇ ಮುಂದುವರೆದು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಬಳಿಕ ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ ಎಂದ ಈಶ್ವರಪ್ಪ, ಡಿ.ಕೆ ಶಿವಕುಮಾರ್ ಅಧ್ಯಕ್ಷರಾದ ಮೇಲೆ ಅವರಿಬ್ಬರ ನಡುವೆ ಯುದ್ದ ನಡೆಯುತ್ತಿದೆ.
ಹೀಗಾಗಿ ಸಿದ್ದರಾಮಯ್ಯ ಅವರಿಗೆ ಏನು ಮಾಡಬೇಕು ಎಂದು ತೋಚುತ್ತಿಲ್ಲ ಎಂದು ವ್ಯಂಗ್ಯವಾಡಿದರು.









