ಐಪಿಎಲ್ 2021 : ಮುಂಬೈ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ
ಶಾರ್ಜಾ : 14ನೇ ಆವೃತ್ತಿಯ 46ನೇ ಮ್ಯಾಚ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಈಗಾಗಲೇ ಪ್ಲೇ ಆಫ್ ಪ್ರವೇಶಿಸಿರುವ ಡೆಲ್ಲಿ ಈ ಪಂದ್ಯ ಗೆದ್ದು ಅಗ್ರಸ್ಥಾನಕ್ಕೇರುವ ತವಕದಲ್ಲಿದೆ. ಇತ್ತ ಮುಂಬೈ ಇಂಡಿಯನ್ಸ್ 11 ಪಂದ್ಯಗಳಲ್ಲಿ 5 ಗೆಲುವು ಮತ್ತು 6 ಸೋಲು ಕಂಡು 10 ಅಂಕಗಳನ್ನು ಹೊಂದಿದೆ.
ಇನ್ನು ಡೆಲ್ಲಿ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಪೃಥ್ವಿ ಶಾ ಕಂ ಬ್ಯಾಕ್ ಮಾಡಿದ್ದಾರೆ. ಮುಂಬೈ ತಂಡದಲ್ಲಿ ರಾಹುಲ್ ಜಹಾರ್ ಬದಲಿಗೆ ಜಯಂತ್ ಯಾದವ್ ಗೆ ಮಣೆ ಹಾಕಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ : ಪೃಥ್ವಿ ಶಾ, ಶಿಖರ್ ಧವನ್,ಸ್ಟೀವ್ ಸ್ಮಿತ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ/ವಿಕೀ), ಶಿಮ್ರಾನ್ ಹೆಟ್ಮಾಯಿರ್, ಅಕ್ಷರ್ ಪಟೇಲ್, ಆರ್ ಅಶ್ವಿನ್, ಕಗಿಸೊ ರಬಾಡಾ, ಎನ್ರಿಚ್ ನಾರ್ಟ್ಜ್,? ಆವೇಶ್ ಖಾನ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿ.ಕೀ), ಸೂರ್ಯಕುಮಾರ್ ಯಾದವ್ , ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನೇಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್








