ಭವಾನಿಪುರ ಉಪಚುನಾವಣೆ : ಮಮತಾ ಬ್ಯಾನರ್ಜಿಗೆ ಮುನ್ನಡೆ Mamata Banerjee saaksha tv
ಕೊಲ್ಕತ್ತಾ : ಭವಾನಿಪುರ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ವೆಸ್ಟ್ ಬೆಂಗಾಲ್ ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿಕೊಂಡಿದ್ದಾರೆ.
ಇAದು ಬೆಳಿಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲರ ನಿರೀಕ್ಷೆಯಂತೆಯೇ ಸಿಎಂ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದಾರೆ.
ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯ ಪ್ರಿಯಾಂಕಾ ತಿಬ್ರೇವಾಲ್ ಮತ್ತು ಸಿಪಿಐ(ಎಂ)ನ ಶ್ರೀಜಿಬ್ ಬಿಸ್ವಾಸ್ ಸ್ಪರ್ಧಿಸಿದ್ದಾರೆ.
ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ, ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಸೋತಿದ್ದರು.
ಆದರೂ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಅವರ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಆರು ತಿಂಗಳೊಳಗೆ ಚುನಾಯಿತರಾಗಬೇಕು.
ಹೀಗಾಗಿ ಮಮತಾ ಬ್ಯಾನರ್ಜಿ ಅವರು ಕೊಲ್ಕತ್ತಾದ ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದೆ.









