ಭವಾನಿಪುರ ಬೈ ಎಲೆಕ್ಷನ್ : ಮಮತಾ ಬ್ಯಾನರ್ಜಿಗೆ ಗೆಲುವು
ಪಶ್ಚಿಮ ಬಂಗಾಳ : ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ.
ಇಂದು ಬೆಳಿಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಆರಂಭವಾಗಿತ್ತು. ಪ್ರಾರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಮಮತಾ ಬ್ಯಾರ್ಜಿ, ಅಂತಿಮವಾಗಿ 58,389 ಮತಗಳಿಂದ ಜಯಗಳಿಸಿದ್ದಾರೆ.
ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರು 58 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.
ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ, ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಸೋತಿದ್ದರು.
ಆದರೂ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಅವರ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಆರು ತಿಂಗಳೊಳಗೆ ಚುನಾಯಿತರಾಗಬೇಕು.
ಹೀಗಾಗಿ ಮಮತಾ ಬ್ಯಾನರ್ಜಿ ಅವರು ಕೊಲ್ಕತ್ತಾದ ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಇದೀಗ ಗೆಲುವು ಸಾಧಿಸಿದ್ದಾರೆ.









