ರಾಜ್ಯದಲ್ಲಿ ಇನ್ನೂ 4 ದಿನ ಮಳೆ – ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಶಾಹೀನ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಕಳೆದ 3 -4 ದಿನಗಳಿಂದ ಮಳೆ ಆಗ್ತಿದ್ದು, ಹಲವೆಡೆ ಬಾರೀ ಅವಾಂತರವನ್ನೇ ಸೃಷ್ಟಿ ಮಾಡಿದೆ. ಕೆಲವೆಡೆ ಜಾನುವಾರುಗಳು ಮೃತಪಟ್ಟಿದ್ರೆ , ಆಸ್ತಿ ಪಾಸ್ತಗೂ ಹಾನಿಯುಂಟಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಭಾರೀ ಮಳೆಯಾಗ್ತಿದೆ. ಈ ನಡುವೆ ಇನ್ನೂ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನೂ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಭಾಗದಲ್ಲಿ –ಯೆಲ್ಲೋ ಅಲರ್ಟ್ ಹಾಗೂ ಅನೇಕ ಜೆಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡದಲ್ಲಿ ಅಕ್ಟೋಬರ್ 5ರಂದು ಯೆಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇತ್ತ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಅಕ್ಟೋಬರ್ 6 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಂಗಳೂರಿನಲ್ಲಿಯೂ ವ್ಯಾಪಕ ಮಳೆಯಾಗಲಿರುವ ಸಾಧ್ತಯತೆಯಿದ್ದು ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.








