FIR ಇಲ್ಲದೆ ಗೃಹಬಂಧನ – ಪ್ರಿಯಾಂಕಾ ಗಾಂಧಿ ಆಕ್ರೋಶ – ಲಖೀಮ್ ಪುರ ಹಿಂಸಾಚಾರದ ವಿಡಿಯೋ ಶೇರ್..!
ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉತ್ತರ ಪ್ರದೇಶದ ಸೀತಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಉತ್ತರಪ್ರದೇಶದ ಲಖೀಮ್ ಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಲು ಹೋದ ಪ್ರಿಯಾಂಕಾ ಅವರು ಸೆಕ್ಷನ್ 144 ಅನ್ನ ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಅವರನ್ನ ಲಖಿಂಪುರ್ ಖೇರಿಗೆ ಹೋಗುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ಪ್ರಿಯಾಂಕಾ ಗಾಂಧಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು, ರಾಷ್ಟ್ರೀಯ ಕಾರ್ಯದರ್ಶಿ ಧೀರಜ್ ಗುರ್ಜಾರ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಪಕ್ಷದ ಎಂಎಲ್‌ಸಿ ದೀಪಕ್ ಸಿಂಗ್ ಅವರನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
— Priyanka Gandhi Vadra (@priyankagandhi) October 5, 2021
ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಂದು ಮುಂಜಾನೆ, ಪ್ರಿಯಾಂಕಾ ಅವರು ಲಖಿಂಪುರ್ ಖೇರಿ ಘಟನೆಯ ವೈರಲ್ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು ಎಫ್ಐಆರ್ ಇಲ್ಲದೆ 28 ಗಂಟೆಗಳ ಕಾಲ ಬಂಧನದಲ್ಲಿದ್ದ ವೇಳೆ ನಾಲ್ಕು ರೈತರ ಹತ್ಯೆಯ ಹಿಂದಿನ ವ್ಯಕ್ತಿಯನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದರು. ಪಿಎಸಿ ಅತಿಥಿಗೃಹದಲ್ಲಿ ಪ್ರಿಯಾಂಕಾ ಚಲನವಲನವನ್ನು ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಆಕೆಯ ಪಕ್ಷ ಆರೋಪಿಸಿದೆ. ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಡ್ರೋನ್‌ಗಳ ಮೇಲ್ವಿಚಾರಣೆಯ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.
ಯಾರು ಜವಾಬ್ದಾರಿ ತೆಗೆದುಕೊಳ್ಳುತ್ತಾರೆ, ಯಾರ ಡ್ರೋನ್ ಇದು ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಸೀತಾಪುರದ ಹರಗಾಂವ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಪ್ರಿಯಾಂಕಾ ಗಾಂಧಿ ಅವರನ್ನ 30 ಗಂಟೆಗಳ ಕಾಲ ಅಕ್ರಮ ಬಂಧನದಲ್ಲಿರಿಸಲಾಗಿತ್ತು ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ಹೊರಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕಿಯ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಅಲ್ಲದೇ ಪ್ರಿಯಾಂಕಾ ಅವರು ಬಿಡುಗಡೆಯಾದ ತಕ್ಷಣ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಲಖಿಂಪುರ್ ಖೇರಿಗೆ ಹೋಗುವುದಾಗಿ ಹೇಳಿದ್ದಾರೆ.
भाजपा सरकार किसानों को कुचलने की राजनीति कर रही है, किसानों को खत्म करने की राजनीति कर रही है। pic.twitter.com/51R5Kmt41B
— Priyanka Gandhi Vadra (@priyankagandhi) October 4, 2021








