ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ಮುಕ್ತ ಅವಕಾಶ Cauvery saaksha tv
ಮಡಿಕೇರಿ : ಈ ಬಾರಿ ಕೊಡಗಿನ ಪವಿತ್ರ ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಇದೇ ಅಕ್ಟೋಬರ್ 17 ರಂದು ಕೊಡಗಿನ ಪವಿತ್ರ ಕಾವೇರಿ ತೀರ್ಥೋದ್ಭವ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ತೀರ್ಥೋದ್ಭವ ವೀಕ್ಷಣೆಗೆ ತಲಕಾವೇರಿ ಕ್ಷೇತ್ರಕ್ಕೆ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಬೋಪಯ್ಯ ಹೇಳಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗಿತ್ತು.
ಈ ವೇಳೆ ತೀರ್ಥೋದ್ಭವ ಸಂದರ್ಭದಲ್ಲಿ ಭಕ್ತರಿಗೆ ಭಾಗವಹಿಸಲು ಮುಕ್ತ ಅವಕಾಶ ನೀಡುವಂತೆ ಬೇಡಿಕೆ ಸಲ್ಲಿಸಲಾಗಿದೆ.
ಇದಕ್ಕೆ ಸಿಎಂ ಸಮ್ಮತಿಸಿದ್ದು, ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.









