ನ್ಯಾಯಾಲಯದ ಆವರಣದಲ್ಲಿ ಸ್ಫೋಟವೊಂದು ಸಂಭವಿಸಿದ ಪರಿಣಾಮ ಮೂವರು ವಕೀಲರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಲಖನೌ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಲಖನೌ ಬಾರ್ ಅಸೋಸಿಯೇಷನ್’ನ ಜಂಟಿ ಕಾರ್ಯದರ್ಶಿ ಸಂಜೀವ್ ಲೋಧಿಯವರನ್ನು ಗುರಿಯಾಗಿರಿಸಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
ಉತ್ತರಪ್ರದೇಶ ವಿಧಾನಸಭೆಗೆ ಕೆಲವೇ ದೂರದಲ್ಲಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಬಳಿ ಈ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆ ಸ್ಥಳಕ್ಕೆ ಧಾವಿಸಿದ ನೂರಾರು ವಕೀಲರು, ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.








