ನಾಳೆ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ Dasara saaksha tv
ಮಂಡ್ಯ : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ವಿದ್ಯುಕ್ತ ಚಾಲನೆ ಸಿಗಲಿದೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾಗೆ ಚಾಲನೆ ನೀಡಿದ್ದು, ಮೈಸೂರಲ್ಲಿ ನವರಾತ್ರಿ ಸಂಭ್ರಮ ಕಳೆಗಟ್ಟಲಿದೆ.
ಎಸ್ ಎಂ ಕೃಷ್ಣ ಅವರು ನಾಳೆ ಬೆಳಗ್ಗೆ 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿ ರಥದಲ್ಲಿನ ಚಾಮುಂಡೇಶ್ವರಿ ತಾಯಿ ಉತ್ಸವ ಮೂರ್ತಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ ಈ ಬಾರಿಯ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಇದಾದ ಬಳಿಕ ಸಂಜೆ ಆರು ಗಂಟೆಗೆ ಅರಮನೆ ಮುಂಭಾಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಇದೇ ವೇಳೆ ಸುಗಮ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಿದ್ದಾರೆ.









