ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು : 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ monsoon saaksha tv
ಬೆಂಗಳೂರು : ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು ಪಡೆದುಕೊಂಡಿದ್ದು, ಒಟ್ಟು 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಒಳನಾಡು ಜಿಲ್ಲೆಗಳಾದ ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ,
ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಬೀದರ್, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದಿನಿಂದ 9ರವರೆಗೆ ಕರಾವಳಿ ಹಾಗೂ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ.
ಅಕ್ಟೋಬರ್ 9ರ ನಂತರ ಕೆಲವೆಡೆ ಸಾಧಾರಣ ಮಳೆಯಾಗಲಿದೆ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.









