ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ Petrol diesel saaksha tv
ನವದೆಹಲಿ : ದೇಶದಾದ್ಯಂತ ಇಂದೂ ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ಇದರೊಂದಿಗೆ ಸತತ ನಾಲ್ಕನೇ ದಿನವೂ ಇಂಧನದ ಬೆಲೆ ಏರಿಕೆಯಾದಂತಾಗಿದೆ.
ಇವತ್ತು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ಏರಿಕೆಯಾಗಿದೆ.
ಇದರೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.24 ರೂ. ಇಂದ 103.54 ಹಾಗೂ 35 ಪೈಸೆ ಹೆಚ್ಚಳದೊಂದಿಗೆ ಡೀಸೆಲ್ ದರ 91.77 ರೂ. ಇಂದ 92.12 ರೂ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.14 ಯಿದ್ದು, ಡೀಸೆಲ್‍ದರ 97.77 ರೂ. ಇದೆ.
ಅಂದಹಾಗೆ ಕಳೆದ ನಾಲ್ಕು ದಿನಗಳಿಂದ ದೇಶದಲ್ಲಿ 25 ಪೈಸೆ, 30 ಪೈಸೆಯಂತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ.