ಜೈಲಿನಲ್ಲಿ ಮಗ – ಬರ್ತ್ ಡೇ ಆಚರಿಸಿಕೊಳ್ಳುವುದಿಲ್ಲ ಎಂದ ಶಾರುಖ್ ಪತ್ನಿ..!
ಮುಂಬೈ : ಬಾಲಿವುಡ್ ನ ಸ್ಟಾರ್ ನಟ ಶಾರುಖ್ ಪುತ್ರ ಸದ್ಯ ಡ್ರಗ್ ಲಿಂಕ್ ಕೇಸ್ ನಲ್ಲಿ ಜೈಲುಪಾಲಾಗಿದ್ದಾರೆ. ಇತ್ತ ಶಾರುಖ್ ಪತ್ನಿ ಗೌರಿ ಖಾನ್ ಮಗ ಜೈಲಿನಲ್ಲಿರುವ ನೋವಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಇಂದು 51ವಸಂತಕ್ಕೆ ಕಾಲಿಟ್ಟಿರುವ ಗೌರಿ ಖಾನ್ ಮಗನ ಫೋಟೋ ಶೇರ್ ಮಾಡಿ ಬಾವುಕರಾಗಿ ಟ್ವೀಟ್ ಮಾಡಿದ್ದಾರೆ. ಮುಂಬೈನ ಖಿಲ್ಲಾ ಕೋರ್ಟ್, ಆರ್ಯನ್ ಖಾನ್ ಮತ್ತು ಇತರರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೊತೆಗೆ ಆರ್ಯನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಐಶಾರಾಮಿ ಕ್ರೂಸ್ ಶಿಪ್ನಲ್ಲಿ ನಡೆದಿತ್ತು ಪಾರ್ಟಿ ಮುಂಬೈ ತೀರಕ್ಕೆ ಸಮೀಪದಲ್ಲಿ ಸಮುದ್ರ ಮಧ್ಯೆ ಐಶಾರಾಮಿ ಕ್ರೂಸ್ ಶಿಪ್ ಮೇಲೆ ಎನ್ಸಿಬಿ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದರು. ಈ ಸಮಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು, ಅವರಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಹ ಇದ್ದರು. ನಂತರ ಆರ್ಯನ್ ಖಾನ್, ಅರ್ಬಾಜ್ ಖಾನ್ ಹಾಗೂ ಮಾಡೆಲ್ ಮುನ್ಮುನ್ ಧಮೇಚಾ ಅವರುಗಳನ್ನು ಎನ್ಸಿಬಿ ಬಂಧಿಸಿತ್ತು. ಪ್ರಕರಣದಲ್ಲಿ ಈವರೆಗೂ 17 ಮಂದಿಯನ್ನು ಬಂಧಿಸಲಾಗಿದೆ.