ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸುಳ್ಳು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು : ಹೆಚ್ ಡಿಕೆ

Mahesh M Dhandu by Mahesh M Dhandu
October 9, 2021
in Newsbeat, Politics, ರಾಜಕೀಯ
Agahanashini River H D Kumaraswamy tweet saaksha tv
Share on FacebookShare on TwitterShare on WhatsappShare on Telegram

ಸುಳ್ಳು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು : ಹೆಚ್ ಡಿಕೆ H D Kumaraswamy saaksha tv

ಬೆಂಗಳೂರು : ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ‘ಅನೈತಿಕ’ ಎಂಬುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ‘ಅಪ್ಪಟ ಸುಳ್ಳು’ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ.

ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಅವರಿಗೆ ಹೇಳಿದ್ದರಂತೆ!

H D Kumaraswamy saaksha tv

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ; ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು.

ಜನವರಿ 9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳ ಕಾಲ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ‘ಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆ’. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ.

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ಹೆಚ್.ಡಿ.ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Tags: #Saaksha TVCongressH D kumaramaswamyJDS
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram