ರಾಮನಗರ ಬಿಟ್ಟು ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ Ramanagara saaksha tv
ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣ ಇದೆ.
ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಸಂಜೆಯ ವೇಳೆಗೆ ಭಾರಿ ಪ್ರಮಾಣದಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ.
ಅಕ್ಟೋಬರ್ 13ರವರೆಗೂ ರಾಜ್ಯದೆಲ್ಲೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ಮತ್ತೆ ನಾಳೆ ರಾಮನಗರ ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿರುವುದರಿಂದ ಮುಂದಿನ ಐದು ದಿನ ರಾಜ್ಯದಲ್ಲಿ ಮಳೆ ಆಗಲಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.
ನಾಳೆ ಹಾಗೂ ನಾಡಿದ್ದು ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚಿನ ಮಳೆ ಸಾಧ್ಯತೆ ಇದೆ.









