ಸತತ ಏಳನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ : ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹತೋಟಿಗೆ ಬರುವ ಲಕ್ಷಣಗಳೇ ಕಾಣುತ್ತಿಲ್ಲ. ದೇಶದಲ್ಲಿ ಪ್ರತಿದಿನ ಇಂಧನ ಬೆಲೆ ಏರಿಕೆಯಾಗುತ್ತಿದೆ. ಕಳೆದ ಆರು ದಿನಗಳಿಂದ ಸತತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಇವತ್ತು ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ಇವತ್ತು ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ಹೆಚ್ಚಾಗಿವೆ. ಇದರೊಂದಿಗೆ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.44 ರೂ – ಡೀಸೆಲ್ 93.17 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 108.08 ರೂ- ಡೀಸೆಲ್ 98.89 ರೂ. ಕೋಲ್ಕತಾದಲ್ಲಿ ಪೆಟ್ರೋಲ್ 105.09 ರೂ- ಡೀಸೆಲ್ 96.28 ರೂರಷ್ಟಾಗಿದೆ.
ಈ ಮೂಲಕ ವಾಹನ ಸವಾರರಿಗೆ ಶಾಕ್ ನೀಡುವುದು ಹೆಚ್ಚಾಗುತ್ತಲೇ ಸಾಗಿದೆ.








