ಮಳಯಾಳಂ ನಟ ನೆಡುಮುಡಿ ವೇಣು ನಿಧನ
ಮಳಯಾಳಂ ( ಮಾಲಿವುಡ್ ) ಸಿನಿಮಾರಂಗದ ಚಿರಪರಿಚಿತ ನಟ ನೆಡುಮುಡಿ ವೇಣು ಅವರು ನಿಧನರಾಗಿದ್ದಾರೆ. ಸೋಮವಾರ ತಿರುವನಂತಪುರದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಇನ್ನೂ ನೆಡುಮುಡಿ ವೇಣು ಅವರಿಗೆ 73 ವರ್ಷ ವಯಸ್ಸಾಗಿತ್ತು. ಇವರು ಹೊಟ್ಟೆ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಅಂದ್ಹಾಗೆ ನೆಡುಮುಡಿ ಅವರು ರಂಗಭೂಮಿ ಕಲಾವಿದರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ 1978ರಲ್ಲಿ ಥಂಬು ಚಿತ್ರದ ಮೂಲಕ ಮಲಯಾಳ ಚಿತ್ರರಂಗ ಪ್ರವೇಶಿಸಿದ್ದರು. ಇವರು ಸುಮಾರು 40ವರ್ಷಗಳ ಕಾಲ ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದರು. ಇವರು ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 3 ರಾಷ್ಟ್ರೀಯ ಪ್ರಶಸ್ತಿಗಳನ್ನ ಗೆದ್ದಿದ್ದಾರೆ.








