ಆಲೂಗಡ್ಡೆ ರೈಸ್
ಬೇಕಾಗುವ ಸಾಮಾಗ್ರಿಗಳು
ಅನ್ನ – 1 ಕಪ್
ಎಣ್ಣೆ – 2 ಚಮಚ
ಉದ್ದಿನಬೇಳೆ – 1/2 ಚಮಚ
ಕಡ್ಲೆಬೇಳೆ – 1/2 ಚಮಚ
ಜೀರಿಗೆ – 1/2 ಚಮಚ
ಸಾಸಿವೆ – 1/2 ಚಮಚ
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಈರುಳ್ಳಿ - 1
ಹಸಿಮೆಣಸು – 1
ಆಲೂಗಡ್ಡೆ – 1
ಅರಿಶಿನ – 1/4 ಚಮಚ
ಮೆಣಸಿನ ಪುಡಿ – 1/2 ಚಮಚ
ಗರಂಮಸಾಲೆ – 1/2 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ನಿಂಬೆ ರಸ – 1 ಚಮಚ
ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪು
ಮಾಡುವ ವಿಧಾನ

ಮೊದಲಿಗೆ ಅನ್ನವನ್ನು ಉದುರು ಉದುರಾಗಿ ಮಾಡಿಟ್ಟುಕೊಳ್ಳಿ. ನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಇದಕ್ಕೆ ಸಾಸಿವೆ ಹಾಕಿ. ಸಾಸಿವೆ ಸಿಡಿದ ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಈರುಳ್ಳಿ, ಹಸಿಮೆಣಸು ಸೇರಿಸಿ ಚೆನ್ನಾಗಿ ಹುರಿಯಿರಿ. ನಂತರ ಸಿಪ್ಪೆ ತೆಗೆದು ಕತ್ತರಿಸಿದ ಆಲೂಗಡ್ಡೆಯನ್ನು ಸೇರಿಸಿ. ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿ ಸಣ್ಣ ಉರಿಯಲ್ಲಿ ಬೇಯಿಸಿ. ಆಲೂಗಡ್ಡೆ ಬೆಂದ ಬಳಿಕ ಅರಿಶಿನ, ಮೆಣಸಿನ ಪುಡಿ, ಗರಂಮಸಾಲೆ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಬಳಿಕ ಮೊದಲೇ ಮಾಡಿಟ್ಟುಕೊಂಡ ಅನ್ನವನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಈಗ ರುಚಿಯಾದ ಆಲೂಗಡ್ಡೆ ರೈಸ್ ಸವಿಯಲು ಸಿದ್ಧವಾಗಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಪ್ರತಿದಿನ ಒಂದು ಚಮಚ ನೆಲ್ಲಿಕಾಯಿ ರಸ ಸೇವನೆಯ ಆರೋಗ್ಯ ಪ್ರಯೋಜನಗಳು https://t.co/s6YGwR3aQO
— Saaksha TV (@SaakshaTv) October 9, 2021
ತೊಂಡೆಕಾಯಿ ಪಲಾವ್ https://t.co/OaDt3AZtVj
— Saaksha TV (@SaakshaTv) October 9, 2021
ದಾಲ್ಚಿನ್ನಿ ಮತ್ತು ಅರಿಶಿನ ಹಾಲನ್ನು ಬೆರೆಸಿ ಕುಡಿಯುವುದರ ಆರೋಗ್ಯ ಪ್ರಯೋಜನಗಳು https://t.co/YHxFuNcnpD
— Saaksha TV (@SaakshaTv) October 8, 2021
ಎಸ್‌ಬಿಐ ಎಫ್‌ಡಿ ಅಥವಾ ಪೋಸ್ಟ್ ಆಫೀಸ್ ಎಫ್‌ಡಿ? ಹೂಡಿಕೆಗೆ ಯಾವುದು ಉತ್ತಮ? https://t.co/r3gh6ftwYf
— Saaksha TV (@SaakshaTv) October 7, 2021
#Saakshatv #cookingrecipe #potatorice








