ಸಾಂಬಾರು ಸರಿಯಿಲ್ಲ ಎಂಬ ಕಾರಣಕ್ಕೆ ತಾಯಿಯ ಕೊಲೆ karawara saaksha tv
ಕಾರವಾರ : ಸಾಂಬಾರು ಸರಿಯಾಗಿ ಮಾಡಿಲ್ಲ ಎಂಬ ಕಾರಣಕ್ಕೆ ಯುವಕನೊರ್ವ ಮದ್ಯದ ನಶೆಯಲ್ಲಿ ಹೆತ್ತ ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿರುವ ಘಟನೆ ಕಾರವಾರ ದೊಡ್ಡಮನೆ ಗ್ರಾಮದಲ್ಲಿ ನಡೆದಿದೆ.
ಪಾರ್ವತಿ ನಾರಾಯಣ ಹಸ್ಲರ್, ರಮ್ಯಾ ನಾರಾಯಣ ಮೃತರಾಗಿದ್ದು, ಮಂಜುನಾಥ್ ಕೊಲೆ ಆರೋಪಿಯಾಗಿದ್ದಾನೆ.
ಮಂಜುನಾಥ್ ಕುಡಿದ ಮತ್ತಿನಲ್ಲಿ ಸಾಂಬಾರಿನ ರುಚಿ ಚೆನ್ನಾಗಿಲ್ಲ ಎಂಬ ಕಾರಣಕ್ಕೆ ಗುಂಡು ಹಾರಿಸಿ ತಾಯಿ ಮತ್ತು ತಂಗಿಯನ್ನ ಕೊಲೆ ಮಾಡಿದ್ದಾನೆ.
ಸದ್ಯ ಕೊಲೆ ಆರೋಪಿಯನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.