ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರು ಭೇಟಿ..!
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮಾಜಿ ಸಿಎಂ ಬಂಗಾರಪ್ಪ ನವರ ಪುತ್ರರಾದ ಮಧು ಬಂಗಾರಪ್ಪ ಮತ್ತು ಕುಮಾರ ಬಂಗಾರಪ್ಪ ಭೇಟಿಯಾಗಿದ್ದಾರೆ.
ಅಲ್ಲದೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ, ನನ್ನ ಮಗಳ ಮದುವೆ ನವೆಂಬರ್ 10ಕ್ಕೆ ಇದೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ಕೊಡಲು ಬಂದಿದ್ದೆ. ಈ ವೇಳೆ ನನ್ನ ತಮ್ಮ ಇದ್ದ ನೋಡಿ ಸಂತೋಷ ಆಯ್ತು.
ನಾವು ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ನನ್ನ ಮಗಳ ಮದುವೆಗೆ ಆಹ್ವಾನ ನೀಡಲು ಬಂದಿದ್ದೆ ಅಷ್ಟೆ ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ ಕುಮಾರ್ ಬಂಗಾರಪ್ಪ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ.
ಕಾಂಗ್ರೆಸ್ ಸೇರ್ತಾರೆ ಅನ್ನೋದು ಸುಳ್ಳು ಸುದ್ದಿ. ನನ್ನನ್ನು ಯಾವ ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿಲ್ಲ, ನಾನು ಕಾಂಗ್ರೆಸ್ ಸೇರಲ್ಲ ಎಂದು ಸ್ಪಷ್ಟಪಡಿಸಿದರು.