ಕಾರು ಹರಿದು 4 ವರ್ಷದ ಮಗು ಸಾವು vijayanagara saaksha tv
ವಿಜಯನಗರ : ಕಾರು ಹರಿದು ಸ್ಥಳದಲ್ಲೇ 4 ವರ್ಷದ ಮಗು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದೆ.
4 ವರ್ಷದ ಹನುಮಂತ ಮೃತ ಮಗುವಾಗಿದ್ದು, ಘಟನೆಯಲ್ಲಿ ಮಗುವಿನ ತಾಯಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಈ ಘಟನೆಗೆ ಕಾರು ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗುತ್ತಿದೆ.
ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಗುವಿನ ಮೇಲೆ ಕಾರು ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ, ಗರ್ಭಿಣಿ ರೂಪ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸರ್ಕಾರಿ ಆಸ್ಪತ್ರೆಯ ನೌಕರ ರವಿ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿಕೊಂಡು ಬಂದಿದ್ದು, ಈ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಇನ್ನು ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









