ಬಸ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ : ನಾಲ್ವರು ಸಾವು tumakur saaksha tv
ತುಮಕೂರು : ಖಾಸಗಿ ಬಸ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ.
ಮೃತರನ್ನು ಚಿಕ್ಕನಾಯಕನಹಳ್ಳಿ ಮೂಲದ ರ್ಶನ್, ತುರುವೇಕೆರೆ ಮೂಲದವರಾದ ಕವಿತಾ, ಕೃಷ್ಣಮರ್ತಿ ಹಾಗೂ ದಿವಾಕರ್ ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ ಮಂಜು ಮಸುಕಿದ ವಾತಾರವಣದಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಟೆಂಪೋದಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಖಾಸಗಿ ಬಸ್ಸಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.









