‘ಕುಮಾರಸ್ವಾಮಿ ಒಬ್ಬ ಅರೆಹುಚ್ಚ’ : ರೇಣುಕಾಚಾರ್ಯ H D Kumaraswamy saaksha tv
ದಾವಣಗೆರೆ : ಆರ್ ಎಸ್ ಎಸ್ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ, ಅರೆಹುಚ್ಚ ಎಂದಿದ್ದಾರೆ.
ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ‘ಕುಮಾರಸ್ವಾಮಿ ಒಬ್ಬ ಅರೆಹುಚ್ಚ’.
ಆರ್ ಎಸ್ ಎಸ್ ಬಗ್ಗೆ ಮಾತನಾಡಿದವರು ಸರ್ವನಾಶ ಆಗ್ತಾರೆ. ಆರ್ ಎಸ್ ಎಸ್ ಹಿಂದುತ್ವ, ಸಂಸ್ಕøತಿಯನ್ನು ಉಳಿಸಿಕೊಂಡು ಹೋಗುತ್ತಿದೆ.
ಆರ್ ಎಸ್ ಎಸ್ ಸಿದ್ಧಾಂತಗಳನ್ನು ಪಾಲಿಸಿದಾಗ ಮಾತ್ರ ಅದರ ಮಹತ್ವ ತಿಳಿಯುತ್ತದೆ ಎಂದು ಕುಮಾರಸ್ವಾಮಿಯವರಿಗೆ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ.
ಇದೇ ವೇಳೆ ಬೆಂಗಳೂರು ಉಸ್ತುವಾರಿ ವಿಚಾರವಾಗಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿ, ಸಚಿವ ಸೋಮಣ್ಣ ನನ್ನ ಆತ್ಮೀಯ ಸ್ನೇಹಿತರು.
ಅವರ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದರು.