ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರು ನಾನಾ ಸರ್ಕಸ್ ನಡೆಸಿ ಸಂಪುಟ ವಿಸ್ತರಣೆ ಮಾಡಿ ಖಾತೆ ಹಂಚಿಕೆ ಮಾಡಿದ್ದಾರೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಹಲವಾರು ಗೊಂದಲಗಳು ಸೃಷ್ಟಿಯಾಗಿದ್ದು, ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿರುವುದು ಭಾರಿ ವಿರೋಧಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಬಿಜೆಪಿ ಹೈ ಕಮಾಂಡ್ ಖಾತೆ ಹಂಚಿಕೆ ಮತ್ತು ಸೃಷ್ಟಿಯಾಗಿರುವ ಗೊಂದಲಗಳ ಬಗ್ಗೆ ವರದಿ ಕೇಳಿದೆ. ವಿಜಯನಗರದ ಶಾಸಕ ಆನಂದ್ ಸಿಂಗ್ ಸೇರಿದಂತೆ ೧೧ ಶಾಸಕರನ್ನು ಸಿಎಂ ಸಂಪುಟಕ್ಕೆ ಸೇರಿಸಿಕೊಂಡು ಸೋಮವಾರ ಖಾತೆ ಹಂಚಿಕೆ ಮಾಡಿದ್ದರು. ಕೆಲ ಕ್ಷಿಪ್ರ ಬೆಳವಣಿಗಳಲ್ಲಿ ಮಂಗಳವಾರ ಬಿಎಸ್ ವೈ ಕೆಲವು ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದರು.
ಮೊದಲು ಯಡಿಯೂರಪ್ಪ ಅವರು ಆನಂದ್ ಸಿಂಗ್‌ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಣೆಯನ್ನು ನೀಡಿದ್ದರು. ಆದರೆ, ಮರುದಿನ ಖಾತೆ ಬದಲಾವಣೆ ಮಾಡಿ ಅರಣ್ಯ ಮತ್ತು ಜೈವಿಕ ಖಾತೆ ನೀಡಿದ್ದರು. ಖಾತೆ ಬದಲಾವಣೆ ಮಾಡಿದ್ದು ಮೂಲ ಬಿಜೆಪಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಪ್ರತಿಪಕ್ಷಗಳು ಸಹ ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿರುವುದಕ್ಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಹೀಗಾಗಿ ಖಾತೆ ಬದಲಾವಣೆ ಮಾಡಿರುವ ಬಗ್ಗೆ ದೆಹಲಿ ವರಿಷ್ಠರು ವರದಿ ಕೇಳಿದ್ದಾರೆ.
ವಿವಾದಕ್ಕೆ ಕಾರಣವಾಗಿದ್ದೇನು?
ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ವಿರುದ್ಧ ಅರಣ್ಯ ಕಾಯ್ದೆ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ಚುನಾವಣೆಗೆ ಸ್ಪರ್ಧಿಸುವಾಗ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿಯೂ ಆನಂದ್ ಸಿಂಗ್ ಇದನ್ನು ಉಲ್ಲೇಖಿಸಿದ್ದಾರೆ. ಅರಣ್ಯ ನಿಯಮ ಉಲ್ಲಂಘನೆ ಮಾಡಿದವರಿಗೆ ಖಾತೆ ನೀಡಿರುವುದಕ್ಕೆ ಟೀಕೆಗಳು ಕೇಳಿ ಬರುತ್ತಿವೆ.
ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!
ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...








