ನವದೆಹಲಿ : ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ಪ್ರಧಾನಿ ನರೇಂದ್ರಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಹುತಾತ್ಮ ಯೋಧರ ಪರಾಕ್ರಮ ಮತ್ತು ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ಟ್ವೀಟ್ ನಲ್ಲಿ.. ಹಂದ್ವಾರದಲ್ಲಿ ಹುತಾತ್ಮರಾದ ಧೈರ್ಯವಂತ ಯೋಧರು ಮತ್ತು ಭದ್ರತಾ ಸಿಬ್ಬಂದಿಗೆ ಗೌರವ ನಮನಗಳು. ಅವರ ತ್ಯಾಗ ಮತ್ತು ಶೌರ್ಯ ಎಂದಿಗೂ ಮರೆಯಲಾಗದು. ಹುತಾತ್ಮ ಯೋಧರು ಸಮರ್ಪಣಾ ಮನೋಭಾವದಿಂದ ನಾಗರಿಕರ ರಕ್ಷಣೆಗೆ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಹುತಾತ್ಮರ ಕುಟುಂಬಗಳಿಗೆ ಮತ್ತು ಅವರ ಸ್ನೇಹಿತರಿಗೆ ಸಂತ್ವಾನ ಹೇಳಿದ್ದಾರೆ.
ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಲ್ ಮತ್ತು ಮೇಜರ್ ವೊಬ್ಬರು ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.








