ಆರ್ಯನ್ ಡ್ರಗ್ಸ್ ಕೇಸ್ ಗೆ ಬಿಗ್ ಟ್ವಿಸ್ಟ್ – NCB ಮುಖ್ಯಸ್ಥರ ವಿರುದ್ಧವೇ ಕಣಕ್ಕೆ ಬೇಡಿಕೆಯಿಟ್ಟ ಆರೋಪ
ಮುಂಬೈ : ಬಾಲಿವುಡ್ ನ ಸ್ಟಾರ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸದ್ಯ ಡ್ರಗ್ಸ್ ಕೇಸ್ ನಲ್ಲಿ ಜೈಲಿನಲ್ಲಿಯೇ ಇದ್ದು, ಸತತವಾಗಿ ಜಾಮೀನು ಅರ್ಜಿ ವಜಾ ಆಗ್ತಲೇ ಇದೆ. ಆರ್ಯನ್ ಪರ ಕಾನೂನು ತಂಡ ಜಾಮೀನಿಗಾಗಿ ಶತಾಯಗಗತಾಯ ಪ್ರಯತ್ನ ಮಾಡ್ತಿದೆ. ಕೆಲ ಸುನಿಲ್ ಶೆಟ್ಟಿ, ಹೃತಿಕ್ ರೋಷನ್ ರಂತಹ ಸ್ಟಾರ್ ಗಳು ಆರ್ಯನ್ ಪರ ಇದ್ರೆ , ಕಂಗನಾ ಅಂತಹವರು ವಿರೋಧಿಸುತ್ತಿದ್ದಾರೆ. ದಿಗ್ವಿಜಯ್ ಸಿಂಗ್ ರಂತಹ ರಾಜಕಾರಣಿಗಳು ಸಪೋರ್ಟ್ ಮಾಡ್ತಿದ್ರೆ ಬಿಜೆಪಿಗರು ಕಾಂಗ್ರೆಸ್ ಗೆ ಟಾಂಗ್ ಕೊಡ್ತಾ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ.
3 ವರ್ಷಗಳ ನಂತರ ಬಣ್ಣದ ಜಗತ್ತಿಗೆ ವಾಪಸ್ ಆಗ್ತಿದ್ದಾರೆ ಪ್ರೇಮ..!
ಈ ನಡುವೆ ಆರ್ಯನ್ ಖಾನ್ ಬಂಧಿಸಿದ NCB ಮುಖ್ಯಸ್ಥರಾದ ಸಮೀರ್ ವಾಂಖೆಡೆ ವಿರುದ್ಧವೇ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಆರ್ಯನ್ ಬಿಡುಗಡೆ ಮಾಡೋಕೆ 25 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ. 18 ಕೋಟಿಗೆ ಡೀಲ್ ಆಗುವಂತೆ ಕಾಣುತ್ತಿದೆ. ಇದರಲ್ಲಿ ಸಮೀರ್ ವಾಂಖೆಡೆಗೆ 8 ಕೋಟಿ ಹೋಗ್ಬೇಕು ಅಂತಾ ಎನ್ಸಿಬಿ ಕಚೇರಿಯಲ್ಲಿಯೇ ಬಿಜೆಪಿ ನಾಯಕ ಕೆಪಿ ಗೋಸಾವಿ ಆಪ್ತ ಪ್ರಭಾಕರ್ ಸೈಲ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೆ ಕ್ರೂಸ್ ರೇಡ್ಗೆ ಸಂಬಂಧಿಸಿದಂತೆ ಖಾಲಿ ಪುಟುಗಳ ಪಂಚನಾಮೆ ಪತ್ರಕ್ಕೆ ಸಮೀರ್ ವಾಂಖೆಡೆ ತಮ್ಮಿಂದ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಪ್ರಭಾಕರ್ ಸೈಲ್ ಆರೋಪ ಮಾಡಿದ್ದಾರೆ.
ಇದಕ್ಕೆ ಸಂಬಂಧಿಸಿ ವೀಡಿಯೋ ರಿಲೀಸ್ ಮಾಡಿರುವ ಸಂಜಯ್ ರೌತ್, ಇದೆಲ್ಲ ಸುಳ್ಳು ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಸೈಲ್ನ್ನು ಬಂಧಿಸಬೇಕು ಎಂದು ಸಮೀರ್ ವಾಂಖೆಡೆ ಒತ್ತಾಯಿಸಿದ್ದಾರೆ. ಜೊತೆಗೆ ಈ ಆರೋಪಗಳೆಲ್ಲ ಸುಳ್ಳು. ಶೀಘ್ರ ಸ್ಪಷ್ಟನೆ ಕೊಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ. ಎನ್ಸಿಬಿ ಕೂಡ ಸಮೀರ್ ಬೆಂಬಲಕ್ಕೆ ಧಾವಿಸಿದೆ. ಸದ್ಯ ಕೆಪಿ ಗೋಸಾವಿ ನಾಪತ್ತೆಯಾಗಿದ್ದಾರೆ. ತಮ್ಮ ಜೀವಕ್ಕೆ ಸಮೀರ್ರಿಂದ ಅಪಾಯವಿದೆ ಎಂಬ ಆತಂಕವನ್ನು ಸೈಲ್ ಹೊರಹಾಕಿದ್ದಾರೆ.








