ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್
ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರದಿಂದ ಆದೇಶ
ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಹೆಚ್ಚಳ
ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇನ್ನೂ ಈ ಬಾರಿ ಶೇ 21. 50 ರಿಂದ ಶೇ. 24.50ಕ್ಕೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ.
3 ತಿಂಗಳ ಹಿಂದೆ ಜುಲೈನಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಶೇ 11.15ರಿಂದ 21.50ಕ್ಕೆ ತುಟ್ಟಿ ಭತ್ಯೆ ಹೆಚ್ಚಿಸಿತ್ತು. ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.
ಮತ್ತೊಂದೆಡೆ ಕೇಂದ್ರ ಸರ್ಕಾರದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ 3ರಷ್ಟು ತುಟ್ಟಿಭತ್ಯೆ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಕಳೆದ ವಾರ ಅನುಮೋದನೆ ನೀಡಿದೆ. ಹೊಸ ಪ್ರಸ್ತಾವ ಅನುಷ್ಠಾನದಿಂದ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯು ಶೇ. 31ಕ್ಕೆ ಏರಿಕೆಯಾಗಲಿದೆ.








