ಕಂಠೀರವ ಸ್ಟೇಡಿಯಂನತ್ತ ಪುನೀತ್ ಪುತ್ರಿ ಧೃತಿ Puneet’s saaksha tv
ಬೆಂಗಳೂರು : ಪುನೀತ್ ರಾಜಕುಮಾರ್ ಅವರ ಪುತ್ರಿ ಧೃತಿ ಅವರು ಬೆಂಗಳೂರಿಗೆ ಬಂದಿಳಿದ್ದಿದ್ದು, ಇದೀಗ ಕಂಠೀರವ ಸ್ಟೇಡಿಯಂನತ್ತ ಪಯಣ ಬೆಳೆಸಿದ್ದಾರೆ.
ಪುನೀತ್ ಪುತ್ರಿ ಧೃತಿ ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ರು. ಬಳಿಕ ಏರ್ ಇಂಡಿಯಾ 502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಇದೀಗ ವಿಮಾನ ನಿಲ್ದಾಣದಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ತೆರಳಿದ್ದಾರೆ.

ಪ್ರಸ್ತುತ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಮಳೆಯಲ್ಲೂ ಅಪ್ಪು ಅಭಿಮಾನಿಗಳು ಅಂತಿಮ ದರ್ಶನಕ್ಕಾಗಿ ಕಾದು ನಿಂತಿದ್ದಾರೆ.








